newsics.com
ದೆಹಲಿ: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆಶಿಗೆ ಕೋರ್ಟ್ ಮತ್ತೆ ರಿಲೀಫ್ ನೀಡಿದೆ.
ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡರು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕರ್ನಾಟಕ ಹೈಕೋರ್ಟ್ ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ಅಲ್ಲದೇ ಸಿಬಿಐ ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂಬುದಾಗಿಯೂ ತಿಳಿಸಿದರು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಾಲ್ಕುವಾರ ವಿಚಾರಣೆ ಮುಂದೂಡಿಕೆ ಮಾಡಿದೆ