newsics.com
ಶಿಗ್ಗಾಂವಿ (ಹಾವೇರಿ): ಉಪ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಿದ್ದರಾಮಯ್ಯ, ಸೋಮವಾರ ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು.
ಹುಲಗೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದಾಗ ಪೆಂಡಾಲ್ ಕುಸಿದು ಬಿದ್ದಿದ್ದರಿಂದ ಗೊಂದಲ ಸೃಷ್ಟಿಯಾಯಿತು.
ತಕ್ಷಣ ಸ್ಥಳದಲ್ಲಿದ್ದ ಸಿಬ್ಬಂದಿ ಹಾಗೂ ಕಾರ್ಯಕರ್ತರು ಪೆಂಡಾಲ್ ಹಿಡಿದು ನಿಂತು ಹೆಚ್ಚಿನ ಸಮಸ್ಯೆಯಾಗದಂತೆ ತಡೆದರು.
ಶಿಗ್ಗಾಂವಿ ಉಪ ಚುನಾವಣೆ ಕಣ ರಂಗೇರುತ್ತಿದ್ದು, ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳ ದುಷ್ಪೆರಿಣಾಮ ಕಾಂಗ್ರೆಸ್ ಹಾಗೂ ಸ್ರಕಾರದ ಮೇಲಾಗಿಲ್ಲ ಎಂಬುದನ್ಜು ನಿರೂಪಿಸಲು ಉಪ ಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾರೆ.
ಇದೇ ವೇಳೆ, ಮುಡಾ ಹಗರಣ ಸಂಬಂಧ ನ.6ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂಗೆ ನೋಟಿಸ್ ನೀಡಿದ್ದಾರೆ.
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್, ನ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ