newsics.com
ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದಿದ್ದ ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಟ, ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಎಫ್‌ಐಆರ್‌ನಲ್ಲಿ, ಮಿಥುನ್ ಕೆಲ ಮಾತುಗಳು ಪ್ರಚೋದನಕಾರಿಯಾಗಿದ್ದು, ಇವು ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಕಾರಣವಾಗಬಹುದು ಎಂದು ಆರೋಪಿಸಲಾಗಿದೆ.
ಸಾಲ್ಟ್ ಲೇಕ್ ನಿವಾಸಿ ಕೌಶಿಕ್ ಸಹಾ ಅವರು ಸಲ್ಲಿಸಿದ ದೂರಿನಲ್ಲಿ ಅಕ್ಟೋಬರ್ 27 ರಂದು ಭಾಷಣ ಮಾಡಿದ ಮಿಥುನ್ ಚಕ್ರವರ್ತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ. ಕೋಮು ದ್ವೇಷವನ್ನು ಉತ್ತೇಜಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಅಡಿ ಸೆಕ್ಷನ್ 192(ಗಲಭೆ ಉಂಟುಮಾಡಲು ಪ್ರಚೋದನೆ) ಮತ್ತು ಸೆಕ್ಷನ್ 196(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೇರಿದಂತೆ ಬಿಎನ್‌ಎಸ್ ಬಹು ವಿಭಾಗಗಳ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದ ಬಿಜೆಪಿ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.