Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಜಮೀರ್‌ಗೆ ಸಂಕಷ್ಟ: ಎಐಸಿಸಿಗೆ ಕಾಂಗ್ರೆಸ್ ಶಾಸಕರಿಂದಲೇ ದೂರು, ಅಸಮಾಧಾನ
ಕರ್ನಾಟಕದೇಶಪ್ರಮುಖ

ಸಚಿವ ಜಮೀರ್‌ಗೆ ಸಂಕಷ್ಟ: ಎಐಸಿಸಿಗೆ ಕಾಂಗ್ರೆಸ್ ಶಾಸಕರಿಂದಲೇ ದೂರು, ಅಸಮಾಧಾನ

Share
1 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್ ಶಾಸಕರು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ.

ವಕ್ಫ್ ವಿಚಾರದಲ್ಲಿ ಜಮೀರ್ ಅವರ ಹೇಳಿಕೆಗಳು ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಇದರೊಂದಿಗೆ ಜಮೀರ್ ಅಹ್ಮದ್ ಸ್ವಪಕ್ಷ, ಪ್ರತಿಕ್ಷಗಳ ಕೆಂಗಣ್ಣಿಗೆ ಗುರಿಯಾದಂತಾಗಿದೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇದೀಗ ಕಾಂಗ್ರೆಸ್ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್ ಅವರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಈಗಿನ ಬೆಳವಣಿಗೆಗಳಿಗೆಲ್ಲ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರದಲ್ಲೇನಿದೆ?:

ಜಮೀರ್ ಅಹ್ಮದ್ ಪದೇ ಪದೇ ಸರ್ಕಾರಕ್ಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ, ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ. ಶಿಗ್ಗಾವಿ ಉಪಚುನಾವಣೆ ಅಭ್ಯರ್ಥಿ ವಿಷಯವಾಗಿಯೂ ಅನಗತ್ಯ ಗೊಂದಲ ಸೃಷ್ಟಿ ಮಾಡಿದ್ದರು. ನಮ್ಮಲ್ಲಿ ಸಾಕಷ್ಟು ಅಲ್ಪಸಂಖ್ಯಾತ ಶಾಸಕರಿದ್ದಾರೆ, ಆದರೆ ಜಮೀರ್ ಮಾತ್ರ ವಿಶೇಷವಾಗಿ ನಡೆದುಕೊಳ್ಳುತ್ತಿದ್ದಾರೆ. ತಾವು ಮಧ್ಯಪ್ರವೇಶಿಸಿ ಜಮೀರ್ ಹೇಳಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದೆ ಪಕ್ಷ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ ಎಂದು ಖರ್ಗೆಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಶಾಸಕರು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಶಾಸಕರು ಬರೆದಿರವುದು ಎನ್ನಲಾದ ಪತ್ರದ ಪ್ರತಿಯೊಂದು ಸದ್ಯ ವಾಟ್ಸ್ಯಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ದೇಶದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಅವಘಡ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

ಮೂವರು‌ ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ

TAGGED:displeasure from Congress MLAs to AICCTrouble for Minister Jameer: ​​Complaint
Share This Article
Facebook Twitter Copy Link Print
Previous Article ಅಮೆರಿಕ ಅಧ್ಯಕ್ಷೀಯ ಚುನಾವಣೆ; ಮೂರು ರಾಜ್ಯಗಳಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ
Next Article ‘ಬಿಹಾರದ ಕೋಗಿಲೆ’ ಶಾರದಾ ಸಿನ್ಹಾ ಇನ್ನಿಲ್ಲ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?