newsics.com
ನಟಿ ರಾಧಿಕಾ ಪಂಡಿತ್ ಅವರು ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರಾಗಿ ವಾದ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಯಶ್ ಮತ್ತು ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡಿದ್ದಾರೆ. ಈ ಜಾಹೀರಾತಿಗಾಗಿ ಜೋಡಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಧಿಕಾ ಪಂಡಿತ್ ಅವರು ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್ ಬಿರುಸಿನಿಂದ ವಾದ ಮಾಡಿದ್ದಾರೆ. ಈ ರೀತಿಯ ದೃಶ್ಯ ಜಾಹೀರಾತಿನಲ್ಲಿದೆ. ಸದ್ಯ. ಸೋಶಿಯಲ್ ಮೀಡಿಯಾದಲ್ಲಿ ಜಾಹೀರಾತು ಭಾರೀ ಸದ್ದು ಮಾಡ್ತಿದೆ.