Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೇಲೂರಲ್ಲಿ ಬೀಡುಬಿಟ್ಟ 50ಕ್ಕೂ ಹೆಚ್ಚು ಕಾಡಾನೆ, ಹೆಚ್ಚಿದ ಆತಂಕ
ಕರ್ನಾಟಕಪ್ರಮುಖ

ಬೇಲೂರಲ್ಲಿ ಬೀಡುಬಿಟ್ಟ 50ಕ್ಕೂ ಹೆಚ್ಚು ಕಾಡಾನೆ, ಹೆಚ್ಚಿದ ಆತಂಕ

Share
1 Min Read
SHARE

newsics.com

ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಸಕಲೇಶಪುರ, ಆಲೂರು ಭಾಗದಲ್ಲಿ ಕಾಡಾನೆಗಳ ದಾಂಧಲೆ ಹೆಚ್ಚಾಗಿತ್ತು. ಆದರೆ, ಕಳೆದ ಒಂದು ತಿಂಗಳಿನಿಂದ ಬೇಲೂರು ತಾಲೂಕಿಗೆ ಎಂಟ್ರಿ ಕೊಟ್ಟಿದ್ದು ಮಲೆನಾಡಿಗರ ಬದುಕನ್ನು ಮೂರಾಬಟ್ಟೆಯಾಗಿಸಿವೆ.

ಕಳೆದ ನಾಲ್ಕು ವರ್ಷಗಳಿಂದ ಕಾಡಾನೆಗಳ ಹಾವಳಿ ದಿನೇದಿನೆ ಹೆಚ್ಚುತ್ತಲೇ ಇದೆ. ಬಿಕ್ಕೋಡು, ಚಿಕ್ಕಬಿಕ್ಕೋಡು, ತಾವರೆಕೆರೆ, ನಿಡುಮನಹಳ್ಳಿ, ಬೆಳ್ಳಾವರ, ಇಂಟಿತೊಳಲು, ಚೌಡನಹಳ್ಳಿ ಬಕ್ರವಳ್ಳಿ ಇತರೆ ಸುತ್ತಮುತ್ತಲ ಗ್ರಾಮದಲ್ಲಿ ಕಾಡಾನೆಗಳು ದಾಂಧಲೆ ನಡೆಸುತ್ತಿವೆ. ರೈತರು ಹಾಗೂ ಕಾಫಿ ಬೆಳೆಗಾರರ ನಿದ್ದೆಗೆಡಿಸಿವೆ.

ಸುಮಾರು ಐವತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಈ ಭಾಗದಲ್ಲಿ ನೆಲೆಯೂರಿದ್ದು ಅಡಕೆ, ಕಾಫಿ, ಬಾಳೆ, ತೆಂಗು, ಭತ್ತ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳನ್ನು ತಿಂದು, ತುಳಿದು ನಾಶಪಡಿಸುತ್ತಿವೆ.

ಮಲೆನಾಡು ಭಾಗದ ರೈತರು ಹಾಗೂ ಕಾಫಿ ಬೆಳೆಗಾರರಿಗೆ ಹಿಂದೆಂದೂ ಕಾಣದ ಸಂಕಷ್ಟ ಎದುರಾಗಿದೆ. ಕಾಡಾನೆಗಳ ಕಾಟಕ್ಕೆ ಬೇಸತ್ತ ರೈತರು ಹಾಗೂ ಕಾಫಿ ಬೆಳೆಗಾರರು ತಮ್ಮ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯದೆ ಪಾಳು ಬಿಟ್ಟಿದ್ದಾರೆ.

ಸಕಲೇಶಪುರ, ಆಲೂರು, ಬೇಲೂರು ಭಾಗದ ರೈತರು ಜೀವನೋಪಾಯಕ್ಕಾಗಿ ಭತ್ತ, ರಾಗಿ, ಮೆಕ್ಕೆಜೋಳ ಬೆಳೆಯುತ್ತಿದ್ದರು. ಆದರೆ, ಆನೆಗಳ ಹಾವಳಿಯಿಂದಾಗಿ ತೀವ್ರ ನಷ್ಟ ಅನುಭವಿಸುತ್ತಿದ್ದು, ಜಮೀನನ್ನು ಉಳುಮೆ ಮಾಡದೆ ಪಾಳು ಬಿಟ್ಟು ಕುಟುಂಬ ನಿರ್ವಹಣೆಗಾಗಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದಾರೆ. ಇನ್ನೂ ಕೆಲವು ರೈತರು ತಮ್ಮ ಜಮೀನಿನಲ್ಲಿ ಭತ್ತ, ಮೆಕ್ಕೆಜೋಳ, ಶುಂಠಿ ಬೆಳೆದಿದ್ದು ಹಗಲು ರಾತ್ರಿ ಎನ್ನದೆ ತಮ್ಮ ಜೀವನನ್ನು ಪಣಕ್ಕಿಟ್ಟು ಬೆಳೆ ಕಾಯುತ್ತಿದ್ದಾರೆ. ತಮ್ಮ ಜಮೀನು ಬಳಿ ಬೆಂಕಿ ಹಾಕಿಕೊಂಡು ಮೈಕ್ ಮೂಲಕ ಸದ್ದು ಮಾಡಿ ಕಾಡಾನೆಗಳು ಬರುತ್ತಿದ್ದಂತೆ ಪಟಾಕಿ ಸಿಡಿಸಿ ಬೆಳೆ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ.

ಕಾಡಾನೆ ದಾಳಿಯಿಂದ ನಾಶವಾದ ಬೆಳೆಗೆ ಅರಣ್ಯ ಇಲಾಖೆ ಸರಿಯಾದ ಪರಿಹಾರ ಕೂಡ ನೀಡುತ್ತಿಲ್ಲ. ಭತ್ತ, ಮೆಕ್ಕೆಜೋಳ, ಶುಂಠಿ ಬೆಳೆಯುವುದನ್ನು ನಿಲ್ಲಿಸುವಂತೆ ಹೇಳುತ್ತಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು, ಅರೇಹಳ್ಳಿ ಹೋಬಳಿ ವ್ಯಾಪ್ತಿಯ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಪ್ರತಿನಿತ್ಯ ವಿದ್ಯಾರ್ಥಿಗಳು ಜೀವ ಭಯದಲ್ಲೇ ಶಾಲಾ ಕಾಲೇಜುಗಳಿಗೆ ತೆರಳಬೇಕಾಗಿದೆ.

40 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

ರೇಣುಕಾಸ್ವಾಮಿ ಕೊಲೆ ಕೇಸ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಫ್ಯಾನ್‌ ನ ಈ ರೀತಿ ಕ್ಲೀನ್‌ ಮಾಡಿ ಕಷ್ಟನೇ ಅನ್ಸಲ್ಲ!

ವಯಾಗ್ರ ಸೇವಿಸಿ ಬಾಲಕಿ ಜತೆ ಲೈಂಗಿಕ ಸಂಪರ್ಕ: ಸೂರತ್ ಡೈಮಂಡ್ ಮ್ಯಾನೇಜರ್ ಸಾವು

TAGGED:increased anxietyMore than 50 wild elephants encamped in Belur
Share This Article
Facebook Twitter Copy Link Print
Previous Article ವಯಾಗ್ರ ಸೇವಿಸಿ ಬಾಲಕಿ ಜತೆ ಲೈಂಗಿಕ ಸಂಪರ್ಕ: ಸೂರತ್ ಡೈಮಂಡ್ ಮ್ಯಾನೇಜರ್ ಸಾವು
Next Article ಕಾಫಿ ಸೇವನೆಗೂ ಮುನ್ನ ಇರಲಿ ಹೆಚ್ಚು ಎಚ್ಚರ! ಗರ್ಭಪಾತಕ್ಕೂ ಕಾರಣವಾದೀತು…

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?