ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು: ಮನನೊಂದು ‘ರೈತ’ ಆತ್ಮಹತ್ಯೆ.!
newsics.com ಹಾವೇರಿ: ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆಗಿದ್ದಕ್ಕೆ ಹಾವೇರಿಯಲ್ಲಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ. 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆಗಿದ್ದಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆ ಗ್ರಾಮದ ಜನರು ಆಕ್ರೋಶ ಹೊರ ಹಾಕಿದ್ದಾರೆ
Copy and paste this URL into your WordPress site to embed
Copy and paste this code into your site to embed