Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪುರುಷ ಟೈಲರ್ ಮಹಿಳೆಯ ಅಳತೆ ತೆಗೆದುಕೊಳ್ಳುವಂತಿಲ್ಲ, ಹೇರ್ ಕಟ್ ಮಾಡುವಂತಿಲ್ಲ!
ದೇಶಪ್ರಮುಖ

ಪುರುಷ ಟೈಲರ್ ಮಹಿಳೆಯ ಅಳತೆ ತೆಗೆದುಕೊಳ್ಳುವಂತಿಲ್ಲ, ಹೇರ್ ಕಟ್ ಮಾಡುವಂತಿಲ್ಲ!

Share
2 Min Read
SHARE

newsics.com

ಲಕ್ನೋ(ಉತ್ತರ ಪ್ರದೇಶ): ಇಲ್ಲಿನ ಮಹಿಳಾ ಆಯೋಗವು ಮಹಿಳೆಯರನ್ನು ‘ಕೆಟ್ಟ ಸ್ಪರ್ಶ’ದಿಂದ ರಕ್ಷಿಸಲು ಮತ್ತು ಪುರುಷರ ಕೆಟ್ಟ ಉದ್ದೇಶಗಳನ್ನು ತಡೆಯಲು ಪ್ರಸ್ತಾವನೆಯನ್ನು ನೀಡಿದೆ.

ಇದರ ಪ್ರಕಾರ, ಪುರುಷ ಟೈಲರ್ ಮಹಿಳೆಯರ ಬಟ್ಟೆಗಳನ್ನು ಹೊಲಿಯಬಾರದು ಅಥವಾ ಅವರ ಕೂದಲನ್ನು ಕತ್ತರಿಸಬಾರದು. ಈ ಪ್ರಸ್ತಾವನೆಯನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಬಬಿತಾ ಚೌಹಾಣ್ ಮಂಡಿಸಿದ್ದು, ಸಭೆಯಲ್ಲಿದ್ದ ಇತರ ಸದಸ್ಯರು ಇದಕ್ಕೆ ಬೆಂಬಲ ಸೂಚಿಸಿದ್ದಾರೆ.

ಅಕ್ಟೋಬರ್ 28ರಂದು ನಡೆದ ಮಹಿಳಾ ಆಯೋಗದ ಸಭೆಯ ನಂತರ, ಪುರುಷರಿಗೆ ಮಹಿಳೆಯರ ಅಳತೆ ತೆಗೆದುಕೊಳ್ಳಲು ಅವಕಾಶ ನೀಡಬಾರದು ಮತ್ತು ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಸೇರಿದಂತೆ ಹಲವು ಸಲಹೆಗಳನ್ನು ನೀಡಿತ್ತು. ಸದ್ಯ ಇದು ಕೇವಲ ಪ್ರಸ್ತಾವನೆಯಾಗಿದ್ದು, ನಂತರ ಮಹಿಳಾ ಆಯೋಗ ಈ ಬಗ್ಗೆ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಿದೆ. ಮಹಿಳಾ ಆಯೋಗದ ನಿಯಮಗಳನ್ನು ಪಾಲಿಸುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ.
ಈ ನಿಟ್ಟಿನಲ್ಲಿ ಯುಪಿ ಮಹಿಳಾ ಆಯೋಗದ ಸದಸ್ಯೆ ಹಿಮಾನಿ ಅಗರ್ವಾಲ್ ಮಾತನಾಡಿದ್ದು, ಇತ್ತೀಚೆಗೆ ನಡೆದ ಮಹಿಳಾ ಆಯೋಗದ ಸಭೆಯಲ್ಲಿ, ಮಹಿಳೆಯರು ಧರಿಸುವ ಬಟ್ಟೆಗಳನ್ನು ಮಹಿಳಾ ಟೈಲರ್‌ಗಳು ಮಾತ್ರ ಅಳತೆ ತೆಗೆದುಕೊಳ್ಳಬೇಕು ಎಂಬ ಪ್ರಸ್ತಾಪವನ್ನು ಮಾಡಲಾಗಿದೆ. ಅಲ್ಲದೇ ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಬೇಕು. ಮಹಿಳಾ ಕ್ಷೌರಿಕರು ಮಾತ್ರ ಸಲೂನ್‌ನಲ್ಲಿ ಮಹಿಳಾ ಗ್ರಾಹಕರನ್ನು ನೋಡಿಕೊಳ್ಳಬೇಕು ಎಂದು ನಾವು ಹೇಳಿದ್ದೇವೆ.

ಈ ರೀತಿಯ ವೃತ್ತಿಯಲ್ಲಿ ತೊಡಗಿರುವ ಪುರುಷರಿಂದಾಗಿ ಮಹಿಳೆಯರು ಕಿರುಕುಳಕ್ಕೊಳಗಾಗುತ್ತಾರೆ. ಪುರುಷರು ತಪ್ಪಾಗಿ ವರ್ತಿಸಲು ಪ್ರಯತ್ನಿಸುತ್ತಾರೆ. ಕೆಲವು ಪುರುಷರ ಉದ್ದೇಶಗಳು ಸಹ ಒಳ್ಳೆಯದಲ್ಲ. ಆದರೆ, ಎಲ್ಲ ಪುರುಷರಿಗೂ ಕೆಟ್ಟ ಉದ್ದೇಶವಿರುತ್ತದೆ ಎಂದಲ್ಲ ಎಂದು ಹೇಳಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಬಬಿತಾ ಚೌಹಾಣ್, ಮಹಿಳೆಯರು ಹೋಗುವ ಜಿಮ್‌ಗಳಲ್ಲಿ ಮಹಿಳಾ ತರಬೇತುದಾರರು ಇರಬೇಕು. ಎಲ್ಲಾ ಜಿಮ್ ತರಬೇತುದಾರರ ಪೊಲೀಸ್ ಪರಿಶೀಲನೆ ನಡೆಸಬೇಕು. ಒಬ್ಬ ಮಹಿಳೆ ಪುರುಷ ತರಬೇತುದಾರರಿಂದ ತರಬೇತಿ ಪಡೆಯಲು ಬಯಸಿದರೆ, ಅವಳು ಅದನ್ನು ಲಿಖಿತವಾಗಿ ನೀಡಬೇಕು. ಏಕೆಂದರೆ, ಜಿಮ್‌ಗೆ ಹೋಗುವ ಮಹಿಳೆಯರು ಮತ್ತು ಬಾಲಕಿಯರ ಶೋಷಣೆಯ ದೂರುಗಳು ಮಹಿಳಾ ಆಯೋಗಕ್ಕೆ ನಿರಂತರವಾಗಿ ಬರುತ್ತಿದ್ದು, ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅಷ್ಟೇ ಅಲ್ಲ, ಹೆಣ್ಣು ಮಕ್ಕಳು ಪ್ರಯಾಣಿಸುವ ಶಾಲಾ ಬಸ್‌ಗಳಲ್ಲಿ ಮಹಿಳಾ ಉದ್ಯೋಗಿಗಳಿರಬೇಕು. ಸದ್ಯ ಮಹಿಳಾ ಆಯೋಗ ಎಲ್ಲ ಜಿಲ್ಲೆಗಳಿಗೂ ಈ ಸಂಬಂಧ ಆದೇಶ ನೀಡಿದೆ. ಒಪ್ಪದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸರ್ಕಾರಿ ಆದೇಶ ಹೊರಬಿದ್ದ ಬೆನ್ನಲ್ಲೇ ವಿಧಾನಸೌಧ ಗಾರ್ಡನ್‌ನಲ್ಲಿ ಬಿಯರ್ ಬಾಟಲ್‌ಗಳು ಪತ್ತೆ!

ಈ ಕಾಯಿಯಿಂದ ತೊಳೆದರೆ ಸಾಕು ಗೋಲ್ಡ್ ಫಳಫಳನೆ ಹೊಳೆಯುತ್ತೆ!

ಹಸಿವಿನಿಂದ ಅಳುತ್ತಿದ್ದ ಸ್ವಂತ ಮಗುವನ್ನು ಕೊಂದ ಪಾಪಿ ತಂದೆ

TAGGED:A male tailor can't take a woman's measurementscan't cut her hair!
Share This Article
Facebook Twitter Copy Link Print
Previous Article ಸರ್ಕಾರಿ ಆದೇಶ ಹೊರಬಿದ್ದ ಬೆನ್ನಲ್ಲೇ ವಿಧಾನಸೌಧ ಗಾರ್ಡನ್‌ನಲ್ಲಿ ಬಿಯರ್ ಬಾಟಲ್‌ಗಳು ಪತ್ತೆ!
Next Article ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕ್ ನಂಟು: NIA ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?