newsics.com
ಚಿನ್ನ, ಬೆಳ್ಳಿ ಖರೀದಿ ಮಾಡಲು & ಮದುವೆ ಸೀಸನ್ ಆರಂಭಕ್ಕೆ ಮೊದಲು ಚಿನ್ನದ ಆರ್ಡರ್‌ನ ಕೊಡಲು ಕಾಯುತ್ತಿದ್ದವರಿಗೆ ಇಂದು ಶಾಕ್ ಸಿಕ್ಕಿದೆ. ಆಭರಣ ಪ್ರಿಯರಿಗೆ ಚಿನ್ನದ ಮಾರುಕಟ್ಟೆ ಇಂದು ಆಘಾತ ನೀಡಿದೆ. ಸತತವಾಗಿ ಇಳಿಕೆ ಕಾಣುತ್ತಿದ್ದ ಚಿನ್ನ & ಬೆಳ್ಳಿ ಬೆಲೆ ಇಂದು ದಿಢೀರ್ 91 ಸಾವಿರ ರೂಪಾಯಿ ಏರಿಕೆ ಕಂಡಿದೆ.
ಹೌದು, ಇದೀಗ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 1 ಕೆ.ಜಿ.ಗೆ 91 ಸಾವಿರ ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 910 ರೂಪಾಯಿ ಏರಿಕೆ ಕಂಡಿದೆ. ಹೀಗಾಗಿ ಇದೀಗ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 79,470 ರೂ. ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ ಬರೋಬ್ಬರಿ 7,94,700 ರೂಪಾಯಿ ಆಗಿದೆ. ಈ ಮೂಲಕ ಚಿನ್ನದ ಬೆಲೆಯಲ್ಲಿ ಇಂದು ಒಂದೇ ದಿನ ಭಾರಿ ದೊಡ್ಡ ಪ್ರಮಾಣದ ಏರಿಕೆ ಕಂಡು ಬಂದಿದೆ.
ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಏರಿಕೆಯನ್ನ ಕಂಡು ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಇದೀಗ 8,500 ರೂಪಾಯಿ ಏರಿಕೆ ಆಗಿದೆ. ಈ ಮೂಲಕ ಪ್ರತಿ 10 ಗ್ರಾಂ ಆಭರಣ ಚಿನ್ನ ಬೆಲೆ ಈಗ 850 ರೂಪಾಯಿ ಏರಿಕೆ ಆಗಿದೆ. ಆಭರಣ ಚಿನ್ನ ಬೆಲೆ ಏರಿಕೆ ಬಳಿಕ ಈಗ ಪ್ರತಿ 10 ಗ್ರಾಂಗೆ 72,850 ರೂಪಾಯಿಗೆ ಮಾರಾಟ ಆಗ್ತಿದೆ. ಮತ್ತೊಂದು ಕಡೆ ಬೆಳ್ಳಿಯ ಬೆಲೆಯಲ್ಲಿ 1000 ರೂಪಾಯಿ ಏರಿಕೆ ಕಂಡು 94,000 ರೂಪಾಯಿ ಪ್ರತಿ ಕೆಜಿಗೆ ಮಾರಾಟ ಆಗುತ್ತಿದೆ.