newsics.com
ಮೈಸೂರು: ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ರದ್ದು ಮಾಡಲು ಚಿಂತನೆ ನಡೆಸಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ಘಟಿಕೋತ್ಸವ ‘ವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರುಗಳು ಕೃಷಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆರಿಗೆ ರದ್ದು ಮಾಡುವುದು, ರೈತ ಉತ್ಪಾದಕ ಸಂಸ್ಥೆಗಳ ವರಮಾನ ತೆರಿಗೆ ಹಾಗೂ ಎಂಐಟಿ ತೆರಿಗೆ ಕಾನೂನು ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಲ್ಲಿಸಿದ ಮನವಿ ಸ್ವೀಕರಿಸಿ ಈ ಮಾಹಿತಿ ನೀಡಿದರು.
ಮೈಕ್ರೋ ಫೈನಾನ್ಸ್‌ಗಳು ಮಹಿಳಾ ಸಂಘಗಳಿಗೆ ಸಾಲ ನೀಡಿ ಕಿರುಕುಳ ನೀಡುತ್ತಿವೆ. ಇದನ್ನು ತಪ್ಪಿಸಲು ವಿಶೇಷ ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸುವುದಾಗಿ ಸಚಿವರು ತಿಳಿಸಿದರು.
ಕೃಷಿ ಚಟುವಟಿಕೆ ಮಾಡುವ ರೈತರಿಗೆ ಯಾವುದೇ ತೆರಿಗೆ ವಿಧಿಸಿಲ್ಲ. ಜಿಎಸ್‌ಟಿ ಬಗ್ಗೆ ನಿಮ್ಮ ರಾಜ್ಯದ ಸಚಿವರು ಮಂಡಳಿ ಸಭೆಯಲ್ಲಿ ಚರ್ಚೆ ಮಾಡಲು ಅವಕಾಶವಿದೆ. ರೈತ ಉತ್ಪಾದಕ ಸಂಸ್ಥೆಗಳಿಗೆ ಎಂಎಟಿ ತೆರಿಗೆ ಕೂಡ ಇರುವುದಿಲ್ಲ ಎಂದರು.
ಡಿಕೆಶಿ ವಿರುದ್ಧದ ತನಿಖೆ ಪುನರಾರಂಭ ಕೋರಿದ್ದ ಸಿಬಿಐ: ಸರ್ಕಾರಕ್ಕೆ “ಸುಪ್ರೀಂ” ನೋಟಿಸ್!