newsics.com
ದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆ ವಾಪಸ್ ಪಡೆದಿದ್ದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದ ಕುರಿತು ಸುಪ್ರೀಂ ಕೋರ್ಟ್ ಇದೀಗ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತ್ಯೇಕವಾಗಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್, ನೋಟಿಸ್ ನೀಡಿದೆ.
ಈ ಮೊದಲು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಯತ್ನಾಳ್ ಹಾಗೂ ಸಿಬಿಐ ಅಧಿಕಾರಿಗಳು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ಕೇಂದ್ರ ಸಂಸ್ಥೆಯೊಂದು ಈ ಪ್ರಕರಣದಲ್ಲಿ ಭಾಗಿಯಾಗಿದೆ. ಇದು ಕೇಂದ್ರ-ರಾಜ್ಯಕ್ಕೆ ಸಂಬಂಧಿಸಿದ ವ್ಯಾಜ್ಯ. ಹೀಗಾಗಿ ಮನವಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳುವ ಮೂಲಕ ಈ ಹಿಂದೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ತೀರ್ಪಿನ ವಿರುದ್ಧ ಯತ್ನಾಳ್, ಸಿಬಿಐನಿಂದ ಕಳೆದವಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು