newsics.com
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಮಹತ್ವದ ವಿಚಾರ ಬಹಿರಂಗವಾಗಿದೆ.
ನಗರದ ವೈಟ್ಫೀಲ್ಡ್ನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಯಲ್ಲಿ ಈ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ಸ್ಫೋಟ ಪ್ರಕರಣದ ತನಿಖೆ ನಡೆಸಿರುವ NIA, ಇತ್ತೀಚೆಗೆ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಇದರಲ್ಲಿ ಈ ಸ್ಪೋಟಕ ಮಾಹಿತಿ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಪಾಕಿಸ್ತಾನದ ನಂಟಿದ್ದು, ಪಾಕ್ ಮೂಲದ ಶಂಕಿತ ಉಗ್ರ ಎ6 ಫೈಸಲ್ ಸದ್ಯ ಪಾಕಿಸ್ತಾನದಲ್ಲಿದ್ದಾನೆ ಎನ್ನಲಾಗಿದೆ. ಮಂಗಳೂರು ಕುಕ್ಕರ್ ಸ್ಫೋಟದ ಬಳಿಕ ತಾಹಾ ಮತ್ತು ಶಾಜಿಬ್ ನಾಪತ್ತೆಯಾಗಿದ್ದರು.
ಕೆಲಕಾಲದ ಬಳಿಕ ಮತ್ತೆ ವಾಪಸ್ ಬೆಂಗಳೂರಿಗೆ ಬಂದಿದ್ದರು. ಆಗ ಮುಜಾಮಿಲ್ ಷರೀಫ್ ಪರಿಚಯವಾಗಿತ್ತು. ಮುಜಾಮಿಲ್ ಮೆಜೆಸ್ಟಿಕ್ ಬಳಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ತಾಹಾ ಮತ್ತು ಶಾಜಿಬ್ ಜತೆಯಾಗಿ ಮುಜಾಮಿಲ್ ಷರೀಫ್ನ ಮನ ಪರಿವರ್ತಿಸಿ ಐಸಿಸ್ಗೆ ಸೇರ್ಪಡೆ ಮಾಡಿದ್ದರು. ಮೊದಲ ಹಂತದಲ್ಲಿ ಕೆಲವು ದುಷ್ಕೃತ್ಯ ನಡೆಸಲು ಮುಜಾಮಿಲ್ಗೆ ತಾಹಾ ಮತ್ತು ಶಾಜಿಬ್ ಟಾಸ್ಕ್ ನೀಡಿದ್ದರು.
ಉಗ್ರರು 2023 ಡಿಸೆಂಬರ್ನಲ್ಲಿ ಬೆಂಗಳೂರಲ್ಲಿ ಬಾಂಬ್ ಸ್ಫೋಟ ನಡೆಸಲು ಸಂಚು ಹೂಡಿದ್ದರು. ಆನ್ಲೈನ್ ಹ್ಯಾಂಡ್ಲರ್ ಮೂಲಕ ಈ ಸೂಚನೆ ಬಂದಿತ್ತು. ಜನವರಿ 22, 2024ರಂದು ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅಂದೇ ಸ್ಫೋಟ ನಡೆಸಿ ಎಂಬ ಸೂಚನೆ ಇತ್ತು. ಈ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿ ಟಾರ್ಗೆಟ್ ಮಾಡಿದ್ದ ಶಾಜಿಬ್, ಬೆಂಗಳೂರಿನಿಂದ ಚೆನ್ನೈಗೆ ಶಿಫ್ಟ್ ಆಗಿದ್ದ.
ಟ್ರಿಪ್ಲಿಕೇನ್ ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡೇ ಐಇಡಿ ಬಾಂಬ್ ತಯಾರಿಸಿದ್ದ. 2024 ಜನವರಿ 22ರಂದು ಬೆಳಗ್ಗೆ ಐಇಡಿ ಬಾಂಬ್ ಹಿಡ್ಕೊಂಡು ಬೆಂಗಳೂರಿಗೆ ಬಂದಿದ್ದ ಶಾಜಿಬ್, ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಾಂಬ್ ಇಡಲು ಸಂಚು ಹೂಡಿದ್ದ.
ಹೆಚ್ಚಿನ ಭದ್ರತೆ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಹಿಂಭಾಗದಲ್ಲಿ ಬಾಂಬ್ ಇಟ್ಟಿದ್ದ. 90 ನಿಮಿಷಕ್ಕೆ ಟೈಮರ್ ಸೆಟ್ ಮಾಡಿದ್ದ. ಬಾಂಬ್ ಬ್ಲಾಸ್ಟ್ ಆಗಲಿಲ್ಲ. ಬಾಂಬ್ ಇಟ್ಟವನೇ ಚೆನ್ನೈಗೆ ಎಸ್ಕೇಪ್ ಆಗಿದ್ದ. ಬಾಂಬ್ ಸ್ಫೋಟವಾಗುವುದಿರಲಿ, ಕನಿಷ್ಠಪಕ್ಷ ಆ ಬಾಂಬ್ ಪತ್ತೆಯೂ ಆಗಲಿಲ್ಲ.
ಮಲ್ಲೇಶ್ವರ ಬಿಜೆಪಿ ಕಚೇರಿಯ ಹಿಂಭಾಗ ಇಟ್ಟಿದ್ದ ಬಾಂಬ್ ಸ್ಫೋಟಗೊಳ್ಳದ ಹಿನ್ನೆಲೆಯಲ್ಲಿ ಮತ್ತೆ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ ಎಂಬ ಮಾಹಿತಿಯನ್ನು ಉಲ್ಲೇಖಿಸಲಾಗಿದೆ.
ಪುರುಷ ಟೈಲರ್ ಮಹಿಳೆಯ ಅಳತೆ ತೆಗೆದುಕೊಳ್ಳುವಂತಿಲ್ಲ, ಹೇರ್ ಕಟ್ ಮಾಡುವಂತಿಲ್ಲ!
ಸರ್ಕಾರಿ ಆದೇಶ ಹೊರಬಿದ್ದ ಬೆನ್ನಲ್ಲೇ ವಿಧಾನಸೌಧ ಗಾರ್ಡನ್ನಲ್ಲಿ ಬಿಯರ್ ಬಾಟಲ್ಗಳು ಪತ್ತೆ!