newsics.com
ಮಂಡ್ಯ: ಜನವರಿ ನಂತರ ಸಕ್ರಿಯ ರಾಜಕಾರಣಕ್ಕೆ ಮರಳುತ್ತೇನೆ, ಬಿಜೆಪಿ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಮೋದಿ ಮಾತಿಗೆ ಬೆಲೆ ಕೊಟ್ಟು ಕ್ಷೇತ್ರ ಬಿಟ್ಟುಕೊಟ್ಟೆ. ನನ್ನ ಅಧಿಕಾರದಲ್ಲಿ ಐದು ವರ್ಷ ನನ್ನ ಸ್ವಂತ ಕೆಲಸಗಳಿಗೆ ಸಮಯ ಸಿಕ್ಕಿರಲಿಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ ಅಷ್ಟೇ. ಜತೆಗೆ ಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಸಮಯ ತೆಗೆದುಕೊಂಡಿದ್ದೆ ಎಂದು ಹೇಳಿದರು.
ಬಿಜೆಪಿ ನನ್ನನ್ನು ಕಡೆಗಣಿಸಿಲ್ಲ. ಅವಶ್ಯಕತೆ ಬಿದ್ದಾಗ ಪಕ್ಷದ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಬಲಪಡಿಸಬೇಕು ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಬಿಜೆಪಿ ಶಕ್ತಿ ಹೆಚ್ಚು ಮಾಡಬೇಕು ಎನ್ನುವ ಮಾತು ತಿಳಿಸಿದ್ದೇನೆ. ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡು ಬಿಜೆಪಿಗೆ ಬಂದಿಲ್ಲ ಎಂದರು.
ಉಸಿರಿರುವರೆಗೂ ನಟ ದರ್ಶನ್ ನನ್ನ ಮಗನೇ ಎಂದು ಪ್ರಶ್ನೆಯೊಂದಕ್ಕೆ ಸುಮಲತಾ ಉತ್ತರಿಸಿದರು.
ಇಡೀ ಸಚಿವ ಸಂಪುಟ ವಿರುದ್ಧವೇ ಲೋಕಾಗೆ ದೂರು, ಇದು ರಾಜ್ಯ ಇತಿಹಾಸದಲ್ಲೇ ಮೊದಲು!
ಬುಧಾದಿತ್ಯ ರಾಜಯೋಗ: ಈ ಐದು ರಾಶಿಗಳಿಗೆ ನವೆಂಬರ್ ಎರಡನೇ ವಾರ ಸೂಪರ್ ಸಮಯ