newsics.com
ಬೆಂಗಳೂರು: ಇದು ರಾಜ್ಯ ಇತಿಹಾಸದಲ್ಲೇ ಮೊದಲು. ಮುಖ್ಯಮಂತ್ರಿ ಸಹಿತ ಸಚಿವ ಸಂಪುಟದ ಎಲ್ಲಾ ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್ ಆರ್ ರಮೇಶ್ ಶುಕ್ರವಾರ ಲೋಕಾಯುಕ್ತ ಕಚೇರಿಗೆ ತೆರಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ 33 ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದಾರೆ.
ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಬಿಬಿಎಂಪಿಯು ತ್ಯಾಜ್ಯ ವಿಲೇವಾರಿಯ ಗುತ್ತಿಗೆಯನ್ನು 25 ವರ್ಷಗಳ ಅವಗೆ ಪೂರ್ವನಿಗದಿತ ಗುತ್ತಿಗೆ ಸಂಸ್ಥೆಗೆ ನೀಡಲು ಸಂಪುಟ ನಿರ್ಣಯ ಕೈಗೊಂಡಿದೆ. ಈಗಾಗಲೇ ಕಪ್ಪುಪಟ್ಟಿಗೆ ಸೇರಿದ ರಾಮ್‌ಕಿ ಇನ್ರಾಸ್ಟ್ರಕ್ಚರ್ ಪ್ರೈ.ಲಿ. ಸೇರಿದಂತೆ ನಾಲ್ಕು ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ 40 ಸಾವಿರ ಕೋಟಿ ರೂ.ಗಳ ವಂಚನೆಯಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಡಿಕೆಶಿ ವಿರುದ್ಧದ ತನಿಖೆ ಪುನರಾರಂಭ ಕೋರಿದ್ದ ಸಿಬಿಐ: ಸರ್ಕಾರಕ್ಕೆ “ಸುಪ್ರೀಂ” ನೋಟಿಸ್!
ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕ್ ನಂಟು: NIA ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ