newsics.com
ಬೆಂಗಳೂರು: ಕುಡಿದ ಮತ್ತಿನಲ್ಲಿ ಜೋಡಿ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಸಿಂಗನಹಳ್ಳಿಯಲ್ಲಿ ನಡೆದಿದೆ.
ಕೊಲೆಯಾದವರನ್ನು ನಾಗೇಶ್ (55) ಮಂಜುನಾಥ್ (50) ಎಂದು ಗುರುತಿಸಲಾಗಿದೆ. ಮೃತರು ಎಸ್ ಆರ್ ಎಸ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.
ಕುಡಿದ ಮತ್ತಿನಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶೆಡ್ ವೊಂದಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಇನ್ನು ಘಟನಾ ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.