newsics.com
ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತುಹಿಸುಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಅಂಬ್ಲಿಗೋಳದಲ್ಲಿ ನಡೆದಿದೆ.
ಗೌರಮ್ಮ (26) ಕೊಲೆಯಾದ ಗೃಹಿಣಿ ಎಂದು ತಿಳಿದುಬಂದಿದೆ. ಮದ್ಯದ ಅಮಲಿನಲ್ಲಿ ಹಲ್ಲೆಗೈದು ಕುತ್ತಿಗೆ ಬಿಗಿದು ಪತಿ ಮನೋಜ್ ನಿಂದ ಕೃತ್ಯ ನಡೆದಿದೆ. ಆರೋಪಿ ಪತಿ ಮನೋಜ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.