newsics.com
ಢಾಕಾ: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಗಡಿಪಾರು ಸಂಬಂಧ ಇಂಟರ್‌ಪೋಲ್‌ಗೆ ಮನವಿ ಮಾಡಲು ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.
ಬಾಂಗ್ಲಾದಲ್ಲಿ ನಡೆದ ಮೀಸಲು ವಿರೋಧಿ ದಂಗೆಯ ವೇಳೆ ವಿದ್ಯಾರ್ಥಿಗಳನ್ನು ಕ್ರೂರ ವಾಗಿ ಹತ್ತಿಕ್ಕಿ ಮಾನವೀಯತೆಯ ವಿರುದ್ಧ ಅಪರಾಧವನ್ನು ಎಸಗಿ ನರಮೇಧಕ್ಕೆ ಕಾರಣವಾಗಿದ್ದಾರೆ ಎಂದು ಆರೋಪಿಸಿ ಹಸೀನಾ ಹಾಗೂ ಅವರ ಅವಾಮಿ ಲೀಗ್ ಪಕ್ಷದ ನಾಯಕರ ವಿರುದ್ಧ 60ಕ್ಕೂ ಅಧಿಕ ದೂರುಗಳು ದಾಖಲಾಗಿದ್ದು, ಅವುಗಳ ವಿಚಾರಣೆಗೆ ಹಸೀನಾ ಹಾಗೂ ಲೀಗ್ ನಾಯಕರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.