newsics.com
ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸೋಮವಾರ ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ, ಅದೇ ದಿನ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ.