newsics.com
ಕಲಬುರಗಿ: ರಾಜ್ಯದಲ್ಲಿ ವಕ್ಫ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮುಂದೆಯೇ ಮರುಳಾರಾಧ್ಯ ಶಿವಾಚಾರ್ಯ ಪ್ರಚೋದನಕಾರಿ ಭಾಷಣ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.
ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ಕೈಬಿಡಬೇಕು ಎಂದು ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪೊಲೀಸರ ಮುಂದೆಯೇ ಮರುಳಾರಾಧ್ಯ ಶಿವಾಚಾರ್ಯ ಭಾಷಣ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ಎಲ್ಲಾ ಯುವಕರ ಮನೆಯಲ್ಲಿ ತಲ್ವಾರ್ಗಳಿವೆ, ಯಾರು ಬರುತ್ತಾರೋ ಅವರನ್ನ ಕಡಿಯುತ್ತೇವೆ ಎನ್ನುತ್ತಿದ್ದಾರೆ ಅವರು (ಅಲ್ಪಸಂಖ್ಯಾತರು). ಭಾರತ ದೇಶವನ್ನು ಪಾಕಿಸ್ತಾನ ಮಾಡುತ್ತೇವೆ ಎನ್ನುತ್ತಿದ್ದಾರೆ. ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಭಾರತ ದೇಶವೇ ಇರಲ್ಲ. ಇನ್ನುಮುಂದೆ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡೋಣ ಎಂದಿದ್ದಾರೆ. ಅಲ್ಲದೆ ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು, ಜೀವ ಕೊಡಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.