newsics.com
ಕನ್ನಡದ ನಟಿ ಶ್ರೀಲೀಲಾಗೆ ಟಾಲಿವುಡ್‌ನಲ್ಲಿ ಭಾರೀ ಬೇಡಿಕೆ ಇದೆ. ನಟನೆಗೂ ಸೈ, ಡ್ಯಾನ್ಸ್‌ಗೂ ಜೈ ಎನ್ನುತ್ತಾ ಚಿತ್ರರಂಗದಲ್ಲಿ ನಟಿ ಸದ್ದು ಮಾಡುತ್ತಿದ್ದಾರೆ. ಇದೀಗ ‘ಪುಷ್ಪ 2’ ಸಿನಿಮಾದಲ್ಲಿ ಶ್ರೀಲೀಲಾ ಸೊಂಟ ಬಳುಕಿಸಿದ್ದು, ನಟಿಯ ಅಫಿಷಿಯಲ್ ಪೋಸ್ಟರ್ ರಿಲೀಸ್ ಆಗಿದೆ.
ನಮ್ಮ ತಂಡಕ್ಕೆ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾಗೆ ಸ್ವಾಗತ ಅಂತ ನಟಿಯ ಪೋಸ್ಟರ್ ಶೇರ್ ಮಾಡಿ ‘ಪುಷ್ಪ 2’ ಚಿತ್ರದ ನಿರ್ಮಾಣ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ. ಪೋಸ್ಟರ್‌ನಲ್ಲಿ ಕನ್ನಡತಿ ಶ್ರೀಲೀಲಾ ಮಾದಕವಾಗಿ ಕಾಣಿಸಿಕೊಂಡಿದ್ದಾರೆ. ಕಿಸ್ಸಿಕ್ ಎಂಬ ಹಾಡಿಗೆ ಅಲ್ಲು ಅರ್ಜುನ್ ಜೊತೆ ಹೆಜ್ಜೆ ಹಾಕಿದ್ದಾರೆ. ಇನ್ನೂ ಈ ಹಾಡು ರಿಲೀಸ್ ಆಗಬೇಕಿದೆ. ಸದ್ಯ ಈ ಪೋಸ್ಟರ್‌ನಿಂದ ಶ್ರೀಲೀಲಾ ಭಾರೀ ಸದ್ದು ಮಾಡುತ್ತಿದ್ದಾರೆ.
ಸಿನಿಮಾದ ಮೊದಲ ಭಾಗದಲ್ಲಿ ಸಮಂತಾ ಸೊಂಟ ಬಳುಕಿಸಿದ್ದರು. ಇದೀಗ ‘ಪುಷ್ಪ 2’ನಲ್ಲಿ ಶ್ರೀಲೀಲಾ ಡ್ಯಾನ್ಸ್ ಮಾಡಿರೋದು ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.