newsics.com
ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಬಸ್ ಅನ್ನು ಹಿಂಬಾಲಿಸಿಕೊಂಡು ಹೋಗಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಹಳೆಗುಡ್ಡದಹಳ್ಳಿಯಲ್ಲಿ ನಡೆದಿದೆ.
ಕಮಲ್ ಸಿಂಗ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವಿಜಯನಗರದಿಂದ ಜಯನಗರ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಸ್ ಅಡ್ಡಗಟ್ಟಿದ ಬೈಕ್ ಸವಾರ, ಸೀದಾ ಬಸ್ ಹತ್ತಿ ಡ್ರೈವರ್ ಮುರ್ತುಜಾ ಸಾಬ್ ಮೇಲೆ ಹಲ್ಲೆ ಮಾಡಿದ್ದಾನೆ. ಚಾಲಕನ ಮುಖದ ಭಾಗಕ್ಕೆ ಹಲ್ಲೆ ನಡೆಸಲಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಬೈಕ್ ಸವಾರನ ವಿರುದ್ಧ ಚಾಲಕ ದೂರು ನೀಡಿದ್ದು, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.