newsics.com
ಮೈಸೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದಿದ್ದ ಸಚಿವ ಜಮೀರ್ ಅಹ್ಮದ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಜಮೀರ್, ನನ್ನ ಮಾತಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ನಾನು ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದದ್ದು ಇದೇ ಮೊದಲೇನಲ್ಲ. ಪ್ರೀತಿಯಿಂದ ಅವರನ್ನು ಹಾಗೇ ಹಲವು ಸಲ ಕರೆದಿದ್ದೇನೆ. ಅವರೂ ನನ್ನನ್ನು ಕುಳ್ಳ ಎಂದು ಕರೆದಿದ್ದಾರೆ. ಆದರೆ ಚುನಾವಣೆ ಕಾರಣಕ್ಕೆ ಇದನ್ನು ವಿವಾದ ಮಾಡಲಾಗುತ್ತಿದೆ. ನನ್ನ ಹೇಳಿಕೆಯಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.