newsics.com
ಬೆಂಗಳೂರು : ಯಶ್ ನಟನೆಯ ಟಾಕ್ಸಿಕ್ ಸಿನಿಮಾಗೆ ಹೊಸ ಸಮಸ್ಯೆ ಎದುರಾಗಿದೆ. ಹೌದು, ಟಾಕ್ಸಿಕ್ ಚಿಂತ್ರತಂಡದಿಂದ ಮರಗಳನ್ನ ಕಡಿದ ಆರೋಪ ಕೇಳಿ ಬಂದಿದ್ದು, ಅರಣ್ಯ ಇಲಾಖೆಯಿಂದ ಎಫ್‌ಐಆರ್ ದಾಖಲಾಗಿದೆ. ಕೋರ್ಟ್ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದ್ದು ಕೆವಿಎನ್ ಪ್ರೊಡಕ್ಷನ್ಸ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ದ ಎಫ್‌ಐಆರ್ ದಾಖಲಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
1964 ರ ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಯಶ್ ಅಭಿನಯದ ಫ್ಯಾನ್ ಇಂಡಿಯಾ ಸಿನಿಮಾಗಾಗಿ ಹೆಚ್ ಎಂಟಿ ಗ್ರೌಂಡ್ ನಲ್ಲಿ ಸೆಟ್ ಹಾಕಲಾಗಿತ್ತು. ಸೆಟ್ ಹಾಕಲು ನೂರಾರು ಮರ ಕಡಿದಿದ್ದ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಈಶ್ವರ್ ಖಂಡ್ರೆ ಪರಿಶೀಲಿಸಿದ್ದರು. ಅಲ್ಲದೇ, ಖಂಡ್ರೆ ಮರ ಕಡಿದ ಬಗ್ಗೆ ನೊಟೀಸ್ ಜಾರಿ ಮಾಡಿದ್ದರು. ಚಿತ್ರತಂಡ, ಕೆನರಾಬ್ಯಾಂಕ್, ಹೆಚ್ ಎಂಟಿಗೆ ನೊಟೀಸ್ ನೀಡಲಾಗಿತ್ತು. ಈಶ್ವರ್ ಖಂಡ್ರೆ ಅಗತ್ಯ ಕ್ರಮಕ್ಕೆ ಸೂಚಿಸಿದ್ದರು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಹೀಗಾಗಿ ಕೋರ್ಟ್ ಆದೇಶದ ಮೇರೆಗೆ ಎಫ್ ಐಆರ್ ದಾಖಲು ಮಾಡಲಾಗಿದೆ.