newsics.com
ದೆಹಲಿ: ಪಶ್ಚಿಮ ಬಂಗಾಳದ ಖ್ಯಾತ ರಂಗಕರ್ಮಿ ಮನೋಜ್ ಮಿತ್ರಾ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 8.50ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಅಮರ್ ಮಿತ್ರಾ ದೃಢಪಡಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ರವೀಂದ್ರ ಸದನಕ್ಕೆ ತರಲಾಗುವುದು.
ಮಿತ್ರಾ ಅವರ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. “ಖ್ಯಾತ ನಟ, ನಿರ್ದೇಶಕ ಮತ್ತು ನಾಟಕಕಾರ “ಬಂಗಾ ಬಿಭೂಷಣ್” ಮನೋಜ್ ಮಿತ್ರಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ನಮ್ಮ ರಂಗಭೂಮಿ ಮತ್ತು ಚಲನಚಿತ್ರ ಜಗತ್ತಿನಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು ಮತ್ತು ಅವರ ಕೊಡುಗೆಗಳು ಅಪಾರವಾಗಿವೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದಿದ್ದಾರೆ.