newsics.com
ಕಾರವಾರ : ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಿಗ್ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ಸತೀಶ್ ಸೈಲ್ ಸೇರಿ ಮೂರು ಮಂದಿಯ ಶಿಕ್ಷೆ ಅಮಾನತುಗೊಳಿಸಿ ಮಹತ್ವದ ಆದೇಶ ನೀಡಿದೆ.
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ 6 ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿ ಇತರೆ ಆರೋಪಿಗಳಿಗೆ ತಲಾ 7 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆ ಪ್ರಶ್ನಿಸಿ ಸತೀಶ್ ಸೈಲ್ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ರಿಲೀಫ್ ನೀಡಿದೆ. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು, 6 ವಾರದಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್‌ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ.