newsics.com
ಈಶಾನ್ಯ ಮಾನ್ಸೂನ್ ಪ್ರಭಾವದಿಂದ ಇಂದು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದಿಂದಾಗಿ ಈ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಮೋಡ ಮುಸುಕಿದ ವಾತಾವರಣದ ಮಧ್ಯೆಯೇ ತುಂತುರು ಮಳೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಕಲೇಶಪುರ, ಉತ್ತರ ಕನ್ನಡ, ಮೈಸೂರು ಭಾಗದಲ್ಲಿ ಹನಿ ಹನಿ ಮಳೆಯಾಗಿದೆ. ಚಳಿಯೂ ಕಂಡುಬಂದಿದೆ.
ಹೌದು, ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಬೆಂಗಳೂರಿ ಸೇರಿ ರಾಜ್ಯದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.