newsics.com
ಬೆಂಗಳೂರು : ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ಮಾಡುತ್ತೇವೆ. ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ. ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ. ಶೀಘ್ರವೇ ಇದರ ಬಗ್ಗೆ ಪರಿಶೀಲಿಸಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.
ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ. ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ರಾಜ್ಯದ ಕ್ರೀಡಾಪಟುಗಳು ಕಾಮನ್ವೆಲ್ತ್, ಒಲಿಂಪಿಕ್ಸ್ನಲ್ಲಿ ಭಾಗವಹಿಸಿ. ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ರಾಜ್ಯದ ಕೀಡಾಪಟುಗಳಿಗೆ ಬಹುಮಾನ ನೀಡಲಾಗುತ್ತೆ. ಚಿನ್ನ ಗೆದ್ರೆ 5 ಕೋಟಿ, ಬೆಳ್ಳಿ ಗೆದ್ರೆ 3 ಕೋಟಿ ಬಹುಮಾನ ನೀಡುತ್ತೇವೆ ಎಂದರು.
ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಧಿಸಿದರೆ ಸರ್ಕಾರ ಕೆಲಸ ಕೂಡ ಕೊಡುತ್ತಿದ್ದೇವೆ. ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ, ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ಇದರೆಲ್ಲವುದರ ಸದುಪಯೋಗೆ ಯುವಕ, ಯುವತಿಯರು ಪಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.