newsics.com
ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿರುವ ಘಟನೆ ತುಮಕೂರಿನ ಹೆಗ್ಗೆರೆಯಲ್ಲಿ ನಡೆದಿದೆ.
ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು ಎಂದು ತಿಳಿದುಬಂದಿದೆ . ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಗ್ಗೆರೆ ಗ್ರಾಮಸ್ಥರು ಬೀದಿ ನಾಯಿ ಹಾವಳಿಗೆ ರೋಸಿ ಹೋಗಿದ್ದು, ನೂರಾರು ಬೀದಿ ನಾಯಿಗಳು ರಸ್ತೆಯಲ್ಲಿಯೇ ಒಡಾಡುತ್ತಿವೆ. ಮಕ್ಕಳು, ಹಿರಿಯರನ್ನು ಕಚ್ಚಿ ಗಾಯಗೊಳಿಸಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಬೀದಿನಾಯಿಗಳಿಗೆ ಕಡಿವಾಣ ಹಾಕುತ್ತಿಲ್ಲ.