newsics.com
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟವಾಗಿದೆ.
ಹಿರಿಯ ಪತ್ರಕರ್ತರಾದ ವಿದ್ಯಾರಶ್ಮಿ ಪೆಲತ್ತಡ್ಕ, ಮಂಜುನಾಥ್ ಚಾಂದ್, ಕವಯತ್ರಿ ಪ್ರಭಾವತಿ ದೇಸಾಯಿ, ಕಥೆಗಾರ ವೀರೇಂದ್ರ ರಾವಿಹಾಳ್, ಕಥೆಗಾರ್ತಿ ಪೂರ್ಣಿಮಾ ಮಾಳಗಿಮನಿ, ದ್ವಾರನಕುಂಟೆ ಪಾತಣ್ಣ, ಕಥೆಗಾರ ಗುರುಪ್ರಸಾದ ಕಂಟಲಗೆರೆ, ಡಾ.ಪರವಿನ ಸುಲ್ತಾನಾ, ಸಮಾಜ ವಿಜ್ಞಾನಿ ಡಾ.ಪ್ರಕಾಶ ಭಟ್, ವಿಮರ್ಶಕ ಡಾ.ಎಚ್.ಎಸ್.ಸತ್ಯನಾರಾಯಣ ಅವರ ಕೃತಿಗಳು ಆಯ್ಕೆಯಾಗಿವೆ ಎಂದು ‘ಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.
ನವೆಂಬರ್ 26ರಂದು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ರತ್ನಕಲಾ ತಿಳಿಸಿದ್ದಾರೆ.
ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್ ನೇಮಕ
ಪುರುಷರಿಗೂ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಸಿಗತ್ತಾ? ಡಿಸಿಎಂ ಡಿಕೆ ಹೇಳಿದ್ದೇನು?