newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ದರ್ಶನ್ ಮಧ್ಯಂತರ ಜಾಮೀನು ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಅಪೀಲು ಸಲ್ಲಿಸಲು ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಲು ಸಿದ್ದತೆ ಆಗುತ್ತಿದೆ.
ಇತ್ತ, ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿಎನ್ ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ.
ಅನಾರೋಗ್ಯದ ಕಾರಣಕ್ಕಾಗಿ ದರ್ಶನ್ ಅವರಿಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಕೂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಈ ಎಲ್ಲಾ ಅಂಶಗಳನ್ನು ಪೊಲೀಸರು ಮೇಲ್ಮನವಿ ಅರ್ಜಿಯಲ್ಲಿ ಪ್ರಸ್ತಾಪಿಸಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪೊಲೀಸ್ ಕಮಿಷನರ್ ಬಿ. ದಯಾನಂದ್, ಮೇಲ್ಮನವಿ ಸಲ್ಲಿಕೆಗೆ ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದಷ್ಟು ಬೇಗ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಕೆಲವು ಪ್ರೊಸಿಜರ್ ಇದೆ. ಅದನ್ನ ಪರಿಶೀಲನೆ ನಡೆಸಿ ಮೇಲ್ಮನವಿ ಸಲ್ಲಿಸಲಾಗುತ್ತೆ ಎಂದು ಸ್ಪಷ್ಟನೆ ನೀಡಿದ್ದಾರೆ .