newsics.com
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಕಾಂಗ್ರೆಸ್ ಹಾಗೂ ಮುಸ್ಲಿಂರ ವಿರುದ್ಧ ರಕ್ತ ಕ್ರಾಂತಿ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದೇಗೌಡ ಹೆಚ್.ಎಂ. ರವರು ಸ್ವಯಂ ಪ್ರೇರಿತ ದೂರು ನೀಡಿದ್ದು, ಈಶ್ವರಪ್ಪರ ವಿರುದ್ಧ ಕಲಂ 196(1)(a), 299BNS ನಂತೆ ಪ್ರಕರಣ ದಾಖಲಾಗಿದೆ.
ನ.13 ರಂದು ಬೆಳಿಗ್ಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಕ್ಫ್ ಪ್ರಕರಣಗಳ ಬಗ್ಗೆ, ಅಂಬೇಡ್ಕರ್ ಇಸ್ಲಾಂ ಸೇರ್ಪಡೆ ಹೇಳಿಕೆ ಬಗ್ಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರ ಮೀಸಲಾತಿ ಬಗ್ಗೆ ಕಾಂಗ್ರೆಸ್ ಸ್ಪಂದಿಸಿ ಹಿಂದೂಸ್ಥಾನವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದರು.
ಅಲ್ಲದೇ, ಧಾರ್ಮಿಕ ಭಾವನೆಗಳು ಕೆರಳುವಂತೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿಯೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಈಶ್ವರಪ್ಪರವರ ಮೇಲೆ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.