newsics.com
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ಹೌದು ರೋಹಿತ್ ಶರ್ಮಾ ಪತ್ನಿ ರಿತಿಕಾ ಶುಕ್ರವಾರ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಗಾಗಲೇ ರೋಹಿತ್ ದಂಪತಿಗೆ 6 ವರ್ಷದ ಮಗಳಿದ್ದು ಇದೀಗ ಮನೆಗೆ ಹೊಸ ಅತಿಥಿಯ ಆಗಮನದಿಂದ ಮನೆಯಲ್ಲಿ ಸಂತಸ ಮನೆಮಾಡಿದೆ.
ರೋಹಿತ್ ಶರ್ಮಾ ಹಾಗೂ ರಿತಿಕಾ ಸಜ್ದೇಹ್ ದಂಪತಿಗೆ ಇದು 2ನೇ ಮಗು. ಇದಕ್ಕೂ ಮುನ್ನ 2018ರಲ್ಲಿ ಮಗಳು ಜನಿಸಿದ್ದರು. ಇದೀಗ ಸಮೈರಾಗೆ ಪುಟ್ಟ ತಮ್ಮನಾಗಿ ಹೊಸ ಅತಿಥಿಯ ಆಗಮನವಾಗಿದೆ.
ಈ ಶುಭ ಸುದ್ದಿಯೊಂದಿಗೆ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಕೂಡ ಸಿಕ್ಕಿದೆ. ಏಕೆಂದರೆ 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯ ಆಡುವುದಿಲ್ಲ ಎನ್ನಲಾಗಿತ್ತು.
ಇದೀಗ ಪುಟ್ಟ ಪಾಪುವಿನ ಆಗಮನದೊಂದಿಗೆ ರೋಹಿತ್ ಶರ್ಮಾ ಫುಲ್ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಹಿಟ್ಮ್ಯಾನ್ ಆಸ್ಟ್ರೇಲಿಯಾಗೆ ಪ್ರಯಾಣಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ.
ಸದ್ಯ ಮುಂಬೈನಲ್ಲಿರುವ ರೋಹಿತ್ ಶರ್ಮಾ ಪರ್ತ್ಗೆ ಟೆಸ್ಟ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ನವೆಂಬರ್ 22 ರಿಂದ ಶುರುವಾಗಲಿರುವ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡವನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ.