newsics.com
ಕಲಬುರಗಿ: ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಶನಿವಾರ ಬೆಳಗ್ಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರ ಕಾರಾಗೃಹದ ಪ್ರತಿ ಸೆಲ್, ಬ್ಯಾರಕ್‌ಗಳನ್ನು ಪರಿಶೀಲಿಸಿದ ಉಪ ಲೋಕಾಯುಕ್ತರು ಅಡುಗೆ ಕೋಣೆಗೆ ತೆರಳಿ ಊಟದ ಗುಣಮಟ್ಟ ಗಮನಿಸಿದರು.
ಈ ವೇಳೆ ಕಾರಾಗೃಹದಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಗರ ಪೋಲಿಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಕಾರಾಗೃಹದ ಸೂಪರಿಂಟೆಂಡೆಂಟ್ ಡಾ.ಅನಿತಾ ಜತೆಗಿದ್ದರು.