newsics.com
ದೆಹಲಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಮಕ್ಕಳ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಝಾನ್ಸಿಯ ರಾಣಿ ಲಕ್ಷ್ಮಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ 16 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕೀಟ್ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.