newsics.com
ಬೆಂಗಳೂರು : ಗೃಹಲಕ್ಷ್ಮೀ ಬೆನ್ನಲ್ಲೇ ಸರ್ಕಾರ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಶಾಕ್ ನೀಡಿದೆ. ರೇಷನ್ ಕಾರ್ಡ್ಗೆ ಸದ್ದಿಲ್ಲದೇ ಆಪರೇಷನ್ಗೆ ಇಳಿದಿದೆ.
ರಾಜ್ಯಾದ್ಯಂತ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಸಾವಿರ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲು ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಜಿಎಸ್ಟಿ ಬಳಸುತ್ತಿದ್ದ 16 ಸಾವಿರ ಫಲಾನುಭವಿಗಳಿಗೆ ಯೋಜನೆಯಿಂದ ಹೊರಗುಳಿಸಲಾಗಿತ್ತು. ಇದೀಗ ಅದೇ ಮಾನದಂಡದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.
ರಾಜ್ಯಾದ್ಯಂತ ಒಟ್ಟು 10 ಸಾವಿರ ಕಾರ್ಡ್ಗಳನ್ನ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಕೆಲವು ಕಾರ್ಡ್ಗಳನ್ನ ಬದಲಾವಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗೆ ಬದಲಾವಣೆ ಮಾಡಲಾಗಿದೆ. ಆದಾಯ ತೆರಿಗೆ ಪಾವತಿ, ವಾರ್ಷಿಕ ಆದಾಯ, ಸರ್ಕಾರಿ ನೌಕರ ಹೀಗೆ ಹಲವು ಮಾನದಂಡ ಇಟ್ಟು ಬಿಪಿಎಲ್ ಕಾರ್ಡ್ ರದ್ದು ಪಡಿಸಲಾಗಿದೆ.
ಪ್ರತಿಕ್ರಿಯೆ ನೀಡಿರೋ ಸಿಎಂ ಸಿದ್ದರಾಮಯ್ಯ, ಅನರ್ಹವಿದ್ದ ಕಾರ್ಡ್ಗಳನ್ನ ಮಾತ್ರ ರದ್ದುಗೊಳಿಸಿಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಸದ್ದಿಲ್ಲದೆ ಬಿಪಿಎಲ್ ಕಾರ್ಡ್ಗೆ ಆಪರೇಷನ್ಗೆ ಇಳಿದಿದೆ. ಬಿಪಿಎಲ್ ಕಾರ್ಡ್ ರದ್ದು ಮಾಡಿಲ್ಲ, ಎಪಿಎಲ್ಗೆ ಬದಲಾಯಿಸಿದ್ದೀವಿ ಎಂದು ಸರ್ಕಾರ ಹೇಳ್ತಿದೆ. ಆದ್ರೆ, ಕಾರ್ಡ್ ಹೊಂದಿದವರು ಕಂಗಾಲಾಗಿದ್ದಾರೆ.