newsics.com
ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಕೆಗೆ ಮತ್ತೆ ಕ್ಯಾನ್ಸರ್ ಕಾರಕ ಪಟ್ಟ ನೀಡಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ಕಡಿಮೆ ಮಾಡಬಹುದು ಎಂದು ವರದಿ ಸಲ್ಲಿಸಿದ್ದು, ಇದು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಆತಂಕ ಮೂಡಿಸಿದೆ.
ತಂಬಾಕು ಮಾದರಿಯಲ್ಲಿ ಅಡಕೆ ನಿಯಂತ್ರಣಕ್ಕೆ ಕಾರಣವಾಗುವ ಆತಂಕ ಅಡಕೆ ಬೆಳೆಗಾರರಲ್ಲಿ ಮೂಡಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಅಡಕೆಯ ಕುರಿತು ಮತ್ತೆ ಮಹತ್ವದ ವರದಿ ಸಲ್ಲಿಸಲಾಗಿದ್ದು, ಅಡಕೆ ಕ್ಯಾನ್ಸರ್ ಕಾರಕ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಳಕೆಗೆ ನಿಯಂತ್ರಣ ಹೇರಲು ಶಿಫಾರಸು ಮಾಡಲಾಗಿದೆ. ಅಡಕೆ ಬಳಕೆಯನ್ನು ನಿಯಂತ್ರಿಸಿದರೆ ಬಾಯಿ ಕ್ಯಾನ್ಸರ್ ತಗ್ಗಿಸಬಹುದೆಂದು ವರದಿ ಸಲ್ಲಿಸಲಾಗಿದೆ. ಅಡಕೆ ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಕಾನೂನು ಸಮರ ನಡೆಯುತ್ತಿದ್ದು, ಅಡಕೆಯು ಆರೋಗ್ಯದಾಯಕ ಎಂದು ಸಾಬೀತುಪಡಿಸಿರುವ ಸಮಯದಲ್ಲೇ ಇಂತಹುದೊಂದು ವರದಿ ಸಲ್ಲಿಕೆಯಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಸಂಘ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ 2024ರ ಅಕ್ಟೋಬರ್ 9ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಅಡಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ದಿ ಲ್ಯಾನ್ಸೆಟ್ ಅಂಕಾಲಜಿ ಎಂಬ ಅಂತಾರಾಷ್
ನಿಮ್ಮ BPL ರೇಷನ್ ಕಾರ್ಡ್ ಯಾವಾಗ ಬೇಕಾದ್ರೂ ರದ್ದಾಗಬಹುದು.. ಇರಲಿ ಎಚ್ಚರ
ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ಹುಷಾರ್… ಇರಲಿ ಅರೋಗ್ಯದ ಬಗ್ಗೆ ಎಚ್ಚರ