newsics.com
ಖಾಸಗಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ಪೊಲೀಸರು ಇಂದು (ನ.18) ನಗರದಲ್ಲಿ ಗಾರ್ಮೆಂಟ್ಸ್ಗಳ ಮೇಲೆ ದಾಳಿ ಮಾಡಿದರು. ಈ ವೇಳೆ ಒಟ್ಟು 15 ಮಂದಿ ಶಂಕಿತ ಬಾಂಗ್ಲಾ ನುಸುಳುಕೋರರು ಪೊಲೀಸರು ವಶಕ್ಕೆ ಪಡೆದವರು.
ಚಿತ್ರದುರ್ಗದ ಕೋಟೆ, ಗ್ರಾಮಾಂತರ ಠಾಣೆಯಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಬಹುತೇಕರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ.
ಶೇಕ್ ಶೈಪುರ್ ರೆಹಮಾನ್, ಸುಮನ್ ಹುಸೇನ್ ಎಂಬವರು ಬಾಂಗ್ಲಾದೇಶದಿಂದ ಅಕ್ರಮವಾಗಿ ದೇಶದೊಳಗೆ ನುಸಳಿರುವುದು ಪಕ್ಕಾ ಆಗಿದೆ.