newsics.com
ಬೆಳಗಾವಿ: ನದಿಯಲ್ಲಿ ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಳಗಾವಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.
ತಂದೆ ಲಕ್ಷ್ಮಣ ರಾಮಾ ಅಂಬಲಿ(46), ಮಕ್ಕಳಾದ ರಮೇಶ(15), ಯಲ್ಲಪ್ಪ(13) ಘಟಪ್ರಭಾ ನದಿಯಲ್ಲಿ ನಾಪತ್ತೆಯಾದವರು ಎಂದು ತಿಳಿದುಬಂದಿದೆ.
ಬೆನಕನಹೊಳಿ ಗ್ರಾಮದ ಲಕ್ಷ್ಮಣ ಮೀನುಗಾರಿಕೆ ಕಸುಬು ಮಾಡುತ್ತಿದ್ದರು. ಇಬ್ಬರು ಮಕ್ಕಳೊಂದಿಗೆ ಮೀನು ಹಿಡಿಯಲು ಹೋಗಿದ್ದ ಲಕ್ಷ್ಮಣ ಮನೆಗೆ ಬಾರದ ಕಾರಣ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕ ಮಾಡಿದ್ದಾರೆ.
ತಕ್ಷಣ ವಿಷಯ ತಿಳಿದ ಪೊಲೀಸರು ಸಿಬ್ಬಂದಿಗೆ ಮಾಹಿತಿ ತಿಳಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.