newsics.com
ಕೋಲ್ಕತ್ತಾ: ಕ್ರೂರವಾಗಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಲಾಗಿದೆ. ಅದರಲ್ಲೂ ಹತ್ಯೆಯಾದ ವ್ಯಕ್ತಿ ಶಾಲಾ ಶಿಕ್ಷಕನಾಗಿದ್ದು, ಸುತ್ತ ಮುತ್ತಲಿನ ಊರುಗಳಲ್ಲಿ ಉತ್ತಮ ಹೆಸರು ಪಡೆದಿದ್ದರಂತೆ.
ಪಶ್ಚಿಮ ಬಂಗಾಳದ ಅಲಿಪುರ್‌ದುವಾರ್ ಜಿಲ್ಲೆಯ ಖಾಸಗಿ ಶಾಲೆಯೊಂದರ ಅಮಾನುಷ ಹತ್ಯೆಯೊಂದರಲ್ಲಿ ಓರ್ವ ಶಿಕ್ಷಕ ಬಲಿಯಾಗಿದ್ದಾನೆ. ಈತನನ್ನು ಸಾಮಾನ್ಯವಾಗಿ ಕೊಲೆ ಮಾಡಿಲ್ಲ, ಬದಲಾಗಿ ಖಾಸಗಿ ಅಂಗವನ್ನು ಕತ್ತರಿಸಿ ಕ್ರೂರವಾಗಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಅಂಗವನ್ನು ಕತ್ತರಿಸಿದ ನಂತರ, ಆರೋಪಿಗಳು ಆತನ ಬಾಯಿಗೆ ಹಾಕಿದ್ದಾರೆ.
ಪೊಲೀಸರು ತನಿಖೆ ಆರಂಭಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕೊಲೆಯಲ್ಲಿ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈತನ ಶವವನ್ನು ಜೈಗಾಂವ್‌ನಲ್ಲಿ ಅವರು ಕೆಲಸ ಮಾಡುತ್ತಿದ್ದ ಪಬ್ಲಿಕ್ ಶಾಲೆಯ ಹಿಂದೆ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.