Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯನ್ನೇ ಕೊಂದ ಪಾಪಿ ಗಂಡ
ಕರ್ನಾಟಕಪ್ರಮುಖ

ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯನ್ನೇ ಕೊಂದ ಪಾಪಿ ಗಂಡ

Share
1 Min Read
SHARE

newsics.com

ಹಾಸನ: ವರದಕ್ಷಿಣೆ ತರುವಂತೆ ಚಿತ್ರಹಿಂಸೆ ನೀಡಿ 3 ತಿಂಗಳ ಗರ್ಭಿಣಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನದ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ.

ನಯನಾ (24) ಮೃತ ಮಹಿಳೆ ಎಂದು ತಿಳಿದುಬಂದಿದೆ. ಮೂರು ವರ್ಷಗಳ ಹಿಂದೆ ನೊರನಕ್ಕಿ ಗ್ರಾಮದ ಅಯ್ಯಪ್ಪ ಹಾಗೂ ನಯನಾ ಮದುವೆಯಾಗಿದ್ದರು. ಮದುವೆಯಾದ ಒಂದು ವರ್ಷದವರೆಗೆ ಗಂಡ-ಹೆಂಡತಿ ಚೆನ್ನಾಗಿಯೇ ಇದ್ದರು. ಆದರೆ ದಿನ ಕಳೆದಂತೆ ತವರು ಮನೆಯಿಂದ ವರದಕ್ಷಿಣೆ ತರುವಂತೆ ಹಿಂಸೆ ಆರಂಭಿಸಿದ್ದ. ಈ ಹಿನ್ನೆಲೆಯಲ್ಲಿ ಹಲವಾರು ಬಾರಿ ರಾಜಿ ಪಂಚಾಯ್ತಿ ನಡೆಸಲಾಗಿತ್ತು. ಈ ನಡುವೆ ನಯನ ಗರ್ಭಿಣಿಯಾಗಿದ್ದರಿಂದ ಒಂದು ತಿಂಗಳಿನಿಂದ ತವರು ಮನೆಯಲ್ಲೇ ಉಳಿದುಕೊಂಡಿದ್ದಳು.

ನ.17 ರ ರಾತ್ರಿ ಅಯ್ಯಪ್ಪ, ಮಾವನ ಮನೆಗೆ ಬಂದು ಅಲ್ಲಿಯೇ ಉಳಿದುಕೊಂಡಿದ್ದ. ಮರುದಿನ ಬೆಳಿಗ್ಗೆ ನಯನಾಳನ್ನು ಮಲ್ಲಪ್ಪನ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದ. ಅಂದಿನಿಂದ ನಯನ ತವರು ಮನೆಯವರ ಫೋನ್ ರಿಸೀವ್ ಮಾಡಿರಲಿಲ್ಲ. ಆದರೆ ಅಯ್ಯಪ್ಪ ಸಂಬಂಧಿ ಶೃತಿ ಎಂಬುವವರು ನಯನಾಳ ತಾಯಿಗೆ ಕರೆ ಮಾಡಿ, ನಿಮ್ಮ ಮಗಳಿಗೆ ಆರೋಗ್ಯ ಸರಿ ಇಲ್ಲ ಎಂದು ತಿಳಿಸಿದ್ದಾರೆ.

ವಿಚಾರ ತಿಳಿದ ನಯನ ತಾಯಿ ಕರೆ ಮಾಡಿದಾಗ, ಅಯ್ಯಪ್ಪ ಕರೆ ಸ್ವೀಕರಿಸಿ, ನಿಮ್ಮ ಮಗಳನ್ನು ನಾನೇ ಕೊಲೆ ಮಾಡಿದ್ದೇನೆ ಎಂದು ಕರೆ ಕಟ್ ಮಾಡಿದ್ದಾನೆ. ಅದಾದ ಬಳಿಕ ಅಯ್ಯಪ್ಪ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ನಯನಾ ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದಳು. ಆದರೂ ಯಾವುದೇ ಕ್ರಮ ಆಗಿರಲಿಲ್ಲ ಎಂದು ನಯನಾ ಪೋಷಕರು ಆರೋಪಿಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:Sinful husband who killed his pregnant wife for dowry
Share This Article
Facebook Twitter Copy Link Print
Previous Article ಎಲೆಕ್ಟ್ರಿಕ್‌ ಗಾಡಿ ಶೋರೂಂಗೆ ಬೆಂಕಿ : ಯುವತಿ ಸಜೀವ ದಹನ
Next Article ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್: ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?