newsics.com
ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ನವೆಂಬರ್ 23ರಂದು ಪ್ರಕಟವಾಲಿದೆ.
ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ ಗೆದ್ದರೆ, ಸಂಡೂರಿನಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಬಹುದು ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯ ಇದೀಗ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಪಿಮಾರ್ಕ್ ಸಮೀಕ್ಷೆ ಪ್ರಕಾರ ಮೂರು ಕ್ಷೇತ್ರಗಳ ಪೈಕಿ ಎನ್ಡಿಎ 2 ಹಾಗೂ ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ. ಈ ಮೂಲಕ ಚನ್ನಪಟ್ಟಣ ಹಾಗೂ ಶಿಗ್ಗಾಂವಿಯನ್ನು ಜೆಡಿಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ವುಳುವ ಸಾಧ್ಯತೆಗಳಿವೆ. ಇನ್ನು ಸಂಡೂರು ಕ್ಷೇತ್ರವನ್ನು ಕೈವಶವಾಗುವ ಸಾಧ್ಯತೆಗಳಿವೆ.