newsics.com
ಚೆನೈ: ಶಾಲಾ ಶಿಕ್ಷಕಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ತಮಿಳುನಾಡಿನ ಮಲ್ಲಿಪಟ್ಟಿನಂ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ.
ರಮಣಿ (26) ಮೃತ ಶಿಕ್ಷಕಿ ಎಂದು ತಿಳಿದುಬಂದಿದೆ. ಮದನ್ ಕೊಲೆ ಆರೋಪಿ. ವಿದ್ಯಾರ್ಥಿಗಳು ಮತ್ತು ಇತರ ಸಿಬ್ಬಂದಿ ಇರುವಾಗಲೇ ಶಾಲಾ ಆವರಣದಲ್ಲಿ ರಮಣಿಯ ಮೇಲೆ ಮದನ್ ಹಲ್ಲೆ ಮಾಡಿದ್ದಾನೆ.
ತೀವ್ರ ಗಾಯಗೊಂಡ ರಮಣಿಯನ್ನು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಾರ್ಗಮಧ್ಯೆ ಶಿಕ್ಷಕಿ ರಮಣಿ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮದನ್ನನ್ನು ಬಂಧಿಸಿ, ತನಿಖೆ ಆರಂಭಿಸಿದ್ದಾರೆ.
ಮೂಲಗಳ ಪ್ರಕಾರ, ರಮಣಿ ಮತ್ತು ಮದನ್ ಸಂಬಂಧದಲ್ಲಿದ್ದರು. ಆದರೆ ಈ ಸಂಬಂಧಕ್ಕೆ ರಮಣಿ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇತ್ತೀಚೆಗೆ ಮದನ್ನ ಮದುವೆ ಪ್ರಸ್ತಾಪವನ್ನು ರಮಣಿ ತಿರಸ್ಕರಿಸಿದ ನಂತರ ಇಬ್ಬರ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಹೀಗಾಗಿ ಕೋಪದ ಭರದಲ್ಲಿ ಮದನ್ ರಮಣಿಗೆ ಚಾಕು ಇರಿದಿದ್ದಾನೆ ಎನ್ನಲಾಗಿದೆ.