newsics.com
ಬೆಂಗಳೂರು: ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ವಿಧಿವಶರಾಗಿದ್ದಾರೆ.
ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ. ಇತ್ತೀಚಿಗೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮನೋಹರ್ ಅವರ ಆರೋಗ್ಯ ವಿಚಾರಿಸಿದ್ದರು.
ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇದಾದ ಬಳಿಕ ಮನೋಹರ್ ಅವರ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Weird Kidnapping! ರೋಬೋಟ್‌ನಿಂದಲೇ ಶೋರೂಂನಿಂದ 12 ದೊಡ್ಡ ರೋಬೋಟ್‌ಗಳ ಅಪಹರಣ! ವೈರಲ್ ವಿಡಿಯೋ ನೋಡಿ