newsics.com
ಯಾದಗಿರಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಯಾದಗಿರಿಯ ಶಹಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಾರ್ಶ್ವವಾಯು ಪೀಡಿತ ಬಾಲಕಿಯ ಮೇಲೆ ಯುವಕ ಅತ್ಯಾಚಾರ ಎಸಗಿದ್ದಾನೆ. ಸಂತೋಷ ಶರಣಪ್ಪ ಇಮನ್(29) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಪಾರ್ಶ್ವವಾಯು ಪೀಡಿತ ಬಾಲಕಿ ಮನೆಯಲ್ಲಿ ಇರುತ್ತಿದ್ದಳು. ಯಾರೂ ಇಲ್ಲದ ವೇಳೆಯಲ್ಲಿ ಮನೆಗೆ ನುಗ್ಗಿದ ಆರೋಪಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಈ ಕುರಿತಾಗಿ ಬಾಲಕಿ ತಾಯಿ ದೂರು ನೀಡಿದ್ದು, ಹೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.