newsics.com
ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ.
ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ. ಹೌದು, ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.