newsics.com
ವಯನಾಡ್ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಇನ್ನು ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅಲ್ಲದೇ, ಈ ಕ್ಷೇತ್ರದಲ್ಲಿ ಒಟ್ಟು 16 ಜನ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಈ ಭಾಗದಲ್ಲಿ ಮೊದಲಿನಿಂದಲೂ ಜನ ಭಾರೀ ಬೆಂಬಲ ಸೂಚಿಸಿದ್ದರು. ಇದೀಗ ಅವರು ವಯನಾಡ್‌ನಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇನ್ನು ಪ್ರಿಯಾಂಕಾ ಗಾಂಧಿ ಅವರು ಬರೋಬ್ಬರಿ 2 ಲಕ್ಷಗಳ ಮತಗಳ ಅಂತರವನ್ನು ಬೆಳಿಗ್ಗೆ 11.30ಕ್ಕೆ ದಾಖಲಿಸಿದ್ದರು.
ವಯನಾಡ್ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಗೆಲುವು ಕಾಂಗ್ರೆಸ್‌ನಲ್ಲಿ ಹಾಗೂ ರಾಹುಲ್‌ಗಾಂಧಿ ಕುಟುಂಬದಲ್ಲಿ ಸಂತೋಷವನ್ನು ಉಂಟು ಮಾಡಿದೆ. ಈ ಕ್ಷೇತ್ರವನ್ನು ಕಳೆದ ಐದು ವರ್ಷಗಳಿಂದ ರಾಹುಲ್ ಗಾಂಧಿ ಅವರು ಪ್ರತಿನಿಧಿಸುತ್ತಿದ್ದಾರೆ. ಈ ಭಾಗದಲ್ಲಿನ ಜನರ ಸಮಸ್ಯೆಗಳಿಗೆ ರಾಹುಲ್ ಗಾಂಧಿ ಅವರು ಸ್ಪಂದಿಸುವ ಮೂಲಕ ಖ್ಯಾತಿ ಗಳಿಸಿದ್ದರು.