newsics.com
ದಾವಣಗೆರೆ: ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ನಡೆದಿದೆ.
65 ವರ್ಷದ ಕಸ್ತೂರಿ ರಂಗಪ್ಪ ಅವರು ಪಡಿತರ ಪಡೆಯಲು ಹೋಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಸುದ್ದಿ ಕೇಳಿ ಅವರ ಪತ್ನಿ ಜಯಮ್ಮ (58) ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ.
ಪತಿ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಪತ್ನಿಗೆ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪತ್ನಿ ಜಯಮ್ಮ ಕುಸಿದುಬಿದ್ದು ಅವರು ಕೂಡ ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ.