newsics.com
ಬೆಂಗಳೂರು: ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ.
ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆ ನೀಡಿದ್ದು, ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ.
ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ನ.26 ರಂದು ಇತರ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ನ.27 ರಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!