newsics.com
ಕೋಸ್ಟರಿಕಾ (ಅಮೆರಿಕ): ಆರು ಮಂದಿ ಪ್ರಯಾಣಿಸುತ್ತಿದ್ದ ವಿಮಾನವೊಂದು ಮಧ್ಯ ಅಮೆರಿಕದ ಕೋಸ್ಟರಿಕಾದಲ್ಲಿ ಪತನಗೊಂಡಿದೆ.
ಕೋಸ್ಟರಿಕಾದ ರಾಜಧಾನಿ ಸ್ಯಾನ್ ಜೋಸ್‌ನ ಆನ್ನೇಯದಲ್ಲಿ ಈ ಅಪಘಾತ ಸಂಭವಿಸಿದೆ. ನವೆಂಬರ್ 25 ರಂದು ಮಧ್ಯಾಹ್ನದ ನಂತರ ಮೌಂಟ್ ಪಿಕೊ ಬ್ಲಾಂಕೊ ಬಳಿ ಅಪ್ಪಳಿಸಿದೆ.
ಶೋಧ ಮತ್ತು ರಕ್ಷಣಾ ಅಧಿಕಾರಿಗಳು ಬೆಟ್ಟದ ಮೇಲೆ ಅವಶೇಷಗಳನ್ನು ಪತ್ತೆಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪತನಗೊಂಡ ವಿಮಾನವನ್ನು ಪರ್ವತದ ತುದಿಯಲ್ಲಿ ಗುರುತಿಸಲಾಗಿದೆ. ಕೋಸ್ಟರಿಕಾದ ಉತ್ತರ ಕೆರಿಬಿಯನ್ ಕರಾವಳಿಯಲ್ಲಿರುವ ಟೋರ್ಟುಗುರೊದಿಂದ ವಿಮಾನವು ಟೇಕ್ ಆಫ್ ಆಗಿದ್ದು ಸ್ಯಾನ್ ಜೋಸ್‌ಗೆ ಹೋಗುತ್ತಿತ್ತು ಎಂದು ವರದಿಯಾಗಿದೆ.
ನಾಗರಿಕ ವಿಮಾನಯಾನ ಉಪನಿರ್ದೇಶಕ ಲೂಯಿಸ್ ಮಿರಾಂಡಾ ಕೂಡ ಇದನ್ನು ಖಚಿತಪಡಿಸಿದ್ದಾರೆ. ಆದರೆ ಪ್ರಯಾಣಿಕರ ಸ್ಥಿತಿ ಅಥವಾ ಅವರ ಗುರುತಿನ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಈ ವಿಚಾರದಲ್ಲಿ ಕೋಸ್ಟರಿಕಾದ ರೆಡ್‌ಕ್ರಾಸ್ ಸಂಸ್ಥೆಯು ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಮಾನ ಪತ್ತೆಯಾಗಿದೆ ಎಂದು ತಿಳಿಸಿದೆ.
RBI Governor ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Karwar News| 128 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಕಳ್ಳನ ಬಂಧನ