RBI Governor ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

newsics.com ಚೆನ್ನೈ: ಅನಾರೋಗ್ಯ ಹಿನ್ನೆಲೆಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಂಗಳವಾರ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ತೀವ್ರವಾದ ಆಸಿಡಿಟಿ ಸಮಸ್ಯೆ ಅನುಭವಿಸಿದ್ದರು. ಅಬ್ಸರ್ವೇಷನ್‌ಗಾಗಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಈಗ ಆರೋಗ್ಯವಾಗಿದ್ದಾರೆ ಮತ್ತು ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ. https://www.newsics.com/2024/11/25/drinking-espresso-coffee-linked-to-higher-cholesterol-in-men/ Sambhala violence| ಸಂಭಾಲಾದಲ್ಲಿ ಇನ್ನೂ ಉದ್ವಿಗ್ನ ಸ್ಥಿತಿ: ಸಂಸದ, … Continue reading RBI Governor ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು